ವಿನೇಶ್ ಫೋಗಟ್ ಕ್ರೀಡಾನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಲೇ ಇಲ್ಲ: ಹರೀಶ್ ಸಾಳ್ವೆ
ಹೊಸದಿಲ್ಲಿ: ಪ್ಯಾರಿಸ್ ಒಲಿಂಪಿಕ್ಸ್ ನಿಂದ ಅನರ್ಹತೆಯ ವಿರುದ್ಧದ ಮೇಲ್ಮನವಿಯ ಸಂದರ್ಭದಲ್ಲಿ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ನಿಂದ ಬೆಂಬಲದ ಕೊರತೆಯನ್ನು ವಿನೇಶ್ ಫೋಗಟ್ ಆರೋಪಿಸಿದ ಕೆಲವು ದಿನಗಳ ನಂತರ, ಹಿರಿಯ ವಕೀಲ ಹರೀಶ್ ಸಾಳ್ವೆ ಅವರು ಇದರ ಬಗ್ಗೆ ಮಾತನಾಡಿದ್ದಾರೆ.
ವಿನೇಶ್ ಫೋಗಟ್ ಅವರು ಕ್ರೀಡಾ ನ್ಯಾಯಾಲಯದ (CAS) ತೀರ್ಪನ್ನು ಪ್ರಶ್ನಿಸದಿರಲು ನಿರ್ಧರಿಸಿದ್ದಾರೆ ಎಂದು ಸಾಳ್ವೆ ಬಹಿರಂಗಪಡಿಸಿದರು. ಸಿಎಎಸ್ ಫೋಗಾಟ್ ಅವರನ್ನು ಅನರ್ಹಗೊಳಿಸುವ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ (ಐಒಸಿ) ನಿರ್ಧಾರವನ್ನು ಎತ್ತಿಹಿಡಿದಿದೆ. ಮಹಿಳೆಯರ 50 ಕೆಜಿ ಕುಸ್ತಿ ವಿಭಾಗದಲ್ಲಿ ಫೈನಲ್ ನಿಂದ ಅನರ್ಹಗೊಂಡ ಬಳಿಕ ವಿನೇಶ್ ಜಂಟಿ ಬೆಳ್ಳಿ ಪದಕಕ್ಕಾಗಿ ಮಾಡಿದ್ದ ಮನವಿಯನ್ನು ಸಿಎಎಸ್ ತಿರಸ್ಕರಿಸಿದೆ.
ವಿನೇಶ್ ಫೋಗಟ್ ಮಹಿಳೆಯರ ಫ್ರೀಸ್ಟೈಲ್ 50 ಕೆಜಿ ಕುಸ್ತಿ ಪಂದ್ಯಾವಳಿಯ ಫೈನಲ್ ನ ದಿನದಂದು ತೂಕದ ಮಿತಿಗಿಂತ 100 ಗ್ರಾಂ ಕಂಡುಬಂದ ನಂತರ ಫೈನಲ್ ನಿಂದ ಅನರ್ಹಗೊಂಡಿದ್ದರು. ಇದರ ಪರಿಣಾಮವಾಗಿ, ಫೋಗಟ್ ಸ್ಪರ್ಧೆಯಿಂದ ಹೊರಹಾಕಲ್ಪಟ್ಟರು. ಅಲ್ಲದೆ ಕೊನೆಯ ಸ್ಥಾನಕ್ಕೆ ತಳ್ಳಲ್ಪಟ್ಟರು. ಈ ನಿರ್ಧಾರದಿಂದ ಅಸಮಾಧಾನಗೊಂಡ ಅವರು ಸಿಎಎಸ್ ಗೆ ಮನವಿ ಮಾಡಿದ್ದರು. ರಾಷ್ಟ್ರೀಯ ಒಲಿಂಪಿಕ್ ಸಂಸ್ಥೆಯ ಪರವಾಗಿ ಹರೀಶ್ ಸಾಳ್ವೆ ವಾದ ಮಾಡಿದ್ದರು.