ದೆಹಲಿ ನೂತನ ಮುಖ್ಯ ಮಂತ್ರಿಯಾಗಿ ಅತಿಶಿ ಆಯ್ಕೆ
ನವದೆಹಲಿ: ಶಾಸಕಿ ಅತಿಶಿ ಅವರನ್ನು ಮುಖ್ಯಮಂತ್ರಿ ಆಗಿ ದೆಹಲಿ ಆಮ್ ಆದ್ಮಿ ಪಕ್ಷ ಪೋಷಿಸಿರುವುದಾಗಿ ತಿಳಿದು ಬಂದಿದೆ.

ಅಬಕಾರಿ ನೀತಿ ಹಗರಣ ಮತ್ತು ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದ ನಂತರ ಜೈಲಿನಿಂದ ಹೊರಬಂದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡುವುದಾಗಿ ತಿಳಿಸಿದ್ದರು. ಸೆ.17ರಂದು ಆಮ್ ಆದ್ಮಿ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಿ ಅತಿಶಿ ಮರ್ಲೆನಾ ಅವರನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವಂತೆ ಕೇಜ್ರಿವಾಲ್ ಪ್ರಸ್ತಾಪಿಸಿದ್ದು ಅದರಂತೆ ಅವರು ಮುಖ್ಯಮಂತ್ರಿ ಆಗಿ ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ.





