ಶಾಸಕ ಮುನಿರತ್ನಗೆ ಮುಂದುವರಿದ ಸಂಕಷ್ಟ, ಮತ್ತೆ ಅರೆಸ್ಟ್
ಬೆಂಗಳೂರು: ಗುತ್ತಿಗೆದಾರನಿಗೆ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಜಾಮೀನು ಪಡೆದು ಹೊರ ಬಂದಿದ್ದ ಆರ್ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಮತ್ತೆ ಪೊಲೀಸರು ಬಂಧಿಸಿದ್ದಾರೆ.

ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. 2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದರು.
ಸಂತ್ರಸ್ತೆ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣ ಸಂಬಂಧ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.





