ಉಪ್ಪಿನಂಗಡಿ: ಕರಾಯದಲ್ಲಿ ಕಾರು-ಬೈಕ್ ಮಧ್ಯೆ ಅಪಘಾತ: ಬೈಕ್ ಸವಾರರಿಗೆ ಗಂಭೀರ ಗಾಯ
ಉಪ್ಪಿನಂಗಡಿ: ಕಾರು ಹಾಗೂ ಬೈಕ್ ಢಿಕ್ಕಿಯಾಗಿ ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ- ಸಮೀಪದ ಕರಾಯ ಎಂಬಲ್ಲಿ ನಡೆದಿದೆ.
ಬೈಕ್ ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರು ಕಾರಿಂಜ ಕಟ್ಟೆ ನಿವಾಸಿಗಳು ಎನ್ನಲಾಗಿದೆ. ಬೈಕ್‌ನಲ್ಲಿ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ ಉಪ್ಪಿನಂಗಡಿ ಕಡೆಯಿಂದ ಕಲ್ಲೇರಿ ಕಡೆಗೆ ಸಾಗುತ್ತಿದ್ದ ಇನೋವಾ ಕಾರು ರಸ್ತೆಯ ಮತ್ತೊಂದು ದಿಕ್ಕಿನಲ್ಲಿರುವ ಪೆಟ್ರೋಲ್ ಪಂಪ್‌ಗೆಂದು ಬಲ ಬದಿಗೆ ತಿರುಗಿಸಿದ್ದು, ಈ ಸಂದರ್ಭ ಎದುರಿನಿಂದ ವೇಗವಾಗಿ ಬರುತ್ತಿದ್ದ ಬೈಕ್ ಕಾರಿನ ಮುಂಭಾಗಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಘಟನೆಯಿಂದ ಬೈಕ್ ಸವಾರರು ರಸ್ತೆಗೆಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.