ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಮತಾಂತರ ನಿಷೇಧ ವಿಧೇಯಕಕ್ಕೆ ಪರಿಷತ್ತಿನಲ್ಲಿ ಅಂಗೀಕಾರ
ಬೆಂಗಳೂರು: ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಮಸೂದೆಗೆ ಸೆ.15ರಂದು ವಿಧಾನಪರಿಷತ್ ನಲ್ಲಿ ಅಂಗೀಕಾರ ದೊರಕಿತು.
ಪರಿಷತ್ನಲ್ಲಿ ಪ್ರಶ್ನೋತ್ತರ ಕಲಾಪ ಬಳಿಕ ಗೃಹ ಸಚಿವ ಆರಗ ಜ್ಞಾನೇದ್ರ ಅವರು ವಿಧೇಯಕ ಮಂಡಿಸಿದರು.
ಮಸೂದೆ ಮಂಡನೆ ವೇಳೆ ವಿಪಕ್ಷ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು.
ವಿಧೇಯಕ ಮೇಲೆ ಚರ್ಚೆ ವೇಳೆ ಆಡಳಿತ ಪಕ್ಷ ಹಾಗೂ ವಿಪಕ್ಷ ಸದಸ್ಯರ ಮಧ್ಯೆ ತೀವ್ರ ಚರ್ಚೆ ನಡೆಯಿತು.
2021ರ ಡಿಸೆಂಬರ್ನಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಲಾಗಿತ್ತು. ವಿಧಾನ ಸಭೆಯ ಅಂಗೀಕಾರವೂ ದೊರಕಿತ್ತು. ಆದರೆ, ವಿಧಾನ ಪರಿಷತ್ನಲ್ಲಿ ಸದಸ್ಯಬಲದ ಕೊರತೆಯಿಂದ ಮಸೂದೆ ಮಂಡಿಸಿರಲಿಲ್ಲ. ಕಳೆದ ಮೇ ತಿಂಗಳಲ್ಲಿ ಸುಗ್ರೀವಾಜ್ಞೆ ಮೂಲಕ ಮಸೂದೆಯನ್ನು ಜಾರಿಗೊಳಿಸಲಾಗಿತ್ತು.