ರಾಜ್ಯಪಾಲರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮುಡಾ ಕೇಸ್ ಸದ್ದು ಮಾಡುವ ಇದೇ ಹೊತ್ತಲ್ಲೇ ಸಿಎಂ ಸಿದ್ದರಾಮಯ್ಯ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ರನ್ನು ಇಂದು ರಾಜಭವನದಲ್ಲಿ ಭೇಟಿಯಾಗಿದ್ದಾರೆ.
ಬೆಂಗಳೂರಿಗೆ ಮಾಲ್ಡೀವ್ಸ್ ಅಧ್ಯಕ್ಷರ ಭೇಟಿ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಔತಣಕೂಟ ಆಯೋಜಿಸಲಾಗಿತ್ತು. ಹೀಗಾಗಿ ರಾಜ್ಯಪಾಲರ ಆಹ್ವಾನ ಮೇರೆಗೆ ರಾಜಭವನಕ್ಕೆ ತೆರಳಿದ್ದ ಸಿದ್ದರಾಮಯ್ಯ ಈ ವೇಳೆ ಭೇಟಿ ಮಾಡಿ ನಗುಮುಖದಿಂದಲೇ ಕೈಕುಲುಕಿ ಕುಶಲೋಪರಿ ವಿಚಾರಿಸಿದ್ದಾರೆ.