ಸುಳ್ಯ: ಪೆಟ್ರೋಲ್ ಸುರಿದು ಬೆಂಕಿಹಚ್ಚಿ ಮಹಿಳೆಯ ಕೊಲೆ ಯತ್ನ, ಪ್ರಕರಣ ದಾಖಲು
ಸುಳ್ಯ: ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿರುವ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲರ್ಪೆ ಜಯಭಾರತಿ (56. ವ) ಎಂಬವರು ಮನೆಯಲ್ಲಿ ಶನಿವಾರ ರಾತ್ರಿ ಮಲಗಿದ್ದ ವೇಳೆ ಮಹಿಳೆಯ ಬಾವ ಶಂಕರ ಅವರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ.
ಗಂಭೀರ ಗಾಯಗೊಂಡಿರುವ ಮಹಿಳೆಯನ್ನು ಸಂಬಂಧಿಕರು ಸುಳ್ಯದ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಕಿ ಹಚ್ಚಿರುವ ವ್ಯಕ್ತಿಗೂ ಗಾಯವಾಗಿದ್ದು, ಆತನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ. ಕೌಟುಂಬಿಕ ವಿವಾದದ ಹಿನ್ನೆಲೆಯಲ್ಲಿ ಕೃತ್ಯ ಎಸಗಿರುವ ಬಗ್ಗೆ ಶಂಕಿಸಲಾಗಿದೆ