ಸಂಜೀವ ಪೂಜಾರಿ ಬಂಧನಕ್ಕೆ ಆಗ್ರಹಿಸಿ ಹಿಂಜಾವೇ ಪ್ರತಿಭಟನೆ
ಪುತ್ತೂರು: ಒಂದು ಸಮುದಾಯದ ಯುವತಿಯರ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿರುವ ಆರೋಪ ಹೊತ್ತಿರುವ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರನ್ನು ಬಂಧಿಸಬೇಕೆಂದು ಆಗ್ರಹಿಸಿ ಹಿಂಜಾವೇ ವತಿಯಿಂದ ಡಿವೈಎಸ್ಪಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಸಂಜೀವ ಪೂಜಾರಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಕೂಡಲೇ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿದರು.
ಡಿವೈಎಸ್‌ಪಿ ಅರುಣ್ ನಾಗೇಗೌಡ ಅವರು ಭರವಸೆ ಭರವಸೆ ನೀಡಿದ ಹಿನ್ನಲೆಯಲ್ಲಿ ಹಿಂಜಾವೇ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಕೊನೆಗೊಳಿಸಲಾಗಿದೆ.