ಅಶೋಕ ಜನ -ಮನ: ಗೂಡುದೀಪ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ನಗದು ಬಹುಮಾನ ಎಷ್ಟು ಗೊತ್ತೇ?
ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಇವರ ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ (ರಿ) ಪುತ್ತೂರು ಇದರ ವತಿಯಿಂದ ನ.2ರಂದು ಪುತ್ತೂರು-ಕೊಂಬೆಟ್ಟು, ತಾಲೂಕು ಕ್ರಿಡಾಂಗಣದಲ್ಲಿ ದೀಪಾವಳಿಯ ಪ್ರಯುಕ್ತ ನಡೆಯಲಿರುವ ವಸ್ತ್ರ ವಿತರಣಾ ಮತ್ತು ಟ್ರಸ್ಟ್ ನ ಫಲಾನುಭವಿಗಳ ವಾರ್ಷಿಕ ಸಮಾವೇಶ ಪ್ರಯುಕ್ತ ಗೂಡು ದೀಪ ಸ್ಪರ್ಧೆ ನಡೆಯಲಿದೆ.
ಈ ಸ್ಪರ್ಧೆಯಲ್ಲಿ ಸುಮಾರು 300ಕ್ಕೂ ಹೆಚ್ಚು ಗೂಡು ದೀಪ ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆ ಇದೆ, ಕಳೆದ ಬಾರಿ 250ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. ಪ್ರಥಮ 10,000, ದ್ವಿತೀಯ 7500 ಹಾಗೂ ತೃತೀಯ ಬಹುಮಾನವಿದ್ದು ಹೆಚ್ಚಿನ ಮಾಹಿತಿಗಾಗಿ ಟ್ರಸ್ಟ್ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.