ಒಂದೇ ವಾರದಲ್ಲಿ ಪುತ್ತೂರಿಗೆ 24 ಕೋಟಿ ರೂ. ಅನುದಾನ: ಕ್ಷೇತ್ರದ ಅಭಿವೃದ್ದಿಗೆ ಶಾಸಕರಿಂದ ಇನ್ನಷ್ಟು ಅನುದಾನ: ಕೆ ಪಿ ಆಳ್ವ
ಪುತ್ತೂರು: ಪುತ್ತೂರಿಗೆ ಒಂದೇ ವಾರದಲ್ಲಿ 24 ಕೋಟಿ ರೂ ಅನುದಾನ ಬಂದಿದ್ದು ಇದು ಶಾಸಕ ಅಶೋಕ್ ರೈ ಅವರ ಅಭಿವೃದ್ದಿಪರ ಕಾಳಜಿಗೆ ಸ್ಪಷ್ಟ ನಿದರ್ಶನವಾಗಿದೆ ಎಂದು ಪುತ್ತೂರು ಬ್ಲಾಕ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ ತಿಳಿಸಿದ್ದಾರೆ.
ಪುತ್ತೂರು ಉಪ್ಪಿನಂಗಡಿ ರಸ್ತೆ ಕಾಂಕ್ರಿಟೀಕರಣಕ್ಕೆ 20 ಕೋಟಿ ರೂ. ಅನುದಾನ ಬಂದಿದ್ದು ಅದರ ಗುದ್ದಲಿ ಪೂಜೆ ನಡೆಸಲಾಗಿದೆ. ಈ ರಸ್ತೆಯ ಅಭಿವೃದ್ದಿ ಹಲವು ವರ್ಷಗಳ ಬೇಡಿಕೆಯಾಗಿದ್ದು ಈ ಬಾರಿ ಅದಕ್ಕೆ ಕಾಲ ಕೂಡಿ ಬಂದಿದೆ. ಪೂರ್ಣಪ್ರಮಾಣದಲ್ಲಿ ಕಾಂಕ್ರೀಟ್ ರಸ್ತೆಯನ್ನು ನಿರ್ಮಾಣ ಮಾಡುವ ಮೂಲಕ ಉತ್ತಮ ರಸ್ತೆಯ ವ್ಯವಸ್ಥೆ ಆಗಲಿದೆ ಅದೇ ರೀತಿ ಪುತ್ತೂರು ಕ್ಷೇತ್ರ ವ್ಯಾಪ್ತಿಯ ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜು, ಪುತ್ತೂರಿ ನಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಒಟ್ಟು ನಾಲ್ಕು ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು ಈ ಮೂರು ಕಾಲೇಜುಗಳು ಶೀಘ್ರದಲ್ಲೇ ಅಭಿವೃದ್ದಿಯಾಗಲಿದೆ ಎಂದು ಹೇಳಿದರು.