20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್
ಪುತ್ತೂರು: 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಟ್ವಾಳ ತಾಲ್ಲೂಕಿನ ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ದಿನಾಂಕ ನ 2004 ನ.7ರಂದು ನಡೆದ ಕಳ್ಳತನ ಪ್ರಕರಣದಲ್ಲಿ ಆರೋಪಿತನಾಗಿ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡು ಕರ್ನಾಟಕದ ಹಲವೆಡೆ ಮತ್ತು ಕೇರಳ ರಾಜ್ಯದಲ್ಲಿ ಹಲವಾರು ಜಾಗದಲ್ಲಿ ವಿಳಾಸ ಬದಲಾವಣೆ ಮಾಡಿಕೊಂಡು ಬಂಧನಕ್ಕೆ ಸಿಗದೇ ತಲೆಮರೆಸಿಕೊಂಡಿದ್ದ ಪುತ್ತೂರು ತಾಲ್ಲೂಕಿನ ಪಾಣಾಜೆ ಗ್ರಾಮದ ನಿವಾಸಿ ಮೊಹಮ್ಮದ್ ಶರೀಫ್ (44ವ) ಎಂಬಾತನನ್ನು ದಿನಾಂಕ 06.11.2024 ರಂದು ಕೇರಳದ ಕಾಸರಗೋಡಿನಲ್ಲಿ ವಶಕ್ಕೆ ಪಡೆಯಲಾಗಿದೆ.
ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಸದ್ರಿ ಆರೋಪಿಯು ಇತ್ತೀಚಿಗೆ ಕೊಲೆ ಪ್ರಕರಣ ಒಂದರಲ್ಲಿ ಕೇರಳದ ಮಂಜೇಶ್ವರ ಠಾಣಾ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದ. ಆರೋಪಿತನ ಪತ್ತೆ ಕಾರ್ಯದಲ್ಲಿ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಾದ ವಿಜಯಪ್ರಸಾದ್ ರವರ ಮಾರ್ಗದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ನಿರೀಕ್ಷಕರಾದ ಶಿವಕುಮಾರ್ ರವರ ನೇತೃತ್ವದಲ್ಲಿ, ಪಿಎಸ್ಐಗಳಾದ ಹರೀಶ್ ಎಂ ಆರ್ ಮತ್ತು ಮೂರ್ತಿ ಹಾಗೂ ಸಿಬ್ಬಂದಿಗಳಾದ ಹರಿಶ್ಚಂದ್ರ ಮತ್ತು ಗಣೇಶ ರವರ ತಂಡ ಕಾರ್ಯಚರಣೆ ನಡೆಸಿದೆ.