ಪುನೀತ್ ಕೆರೆಹಳ್ಳಿ ಬಂಧನ
ಬೆಂಗಳೂರು: ಸಚಿವ ಜಮೀರ್ ಅಹಮದ್ ಖಾನ್ ಅವರು ಕೇಂದ್ರ ಸಂಸದ ಎಚ್.ಡಿ ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡಿದ್ದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಪುನೀತ್ ಕೆರೆಹಳ್ಳಿ ವಿಡಿಯೋವೊಂದನ್ನು ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂದ್ದು ಜಮೀರ್ ಅವರ ಬಗ್ಗೆ ಏ ಜಮೀರ್ ಎಂದು ಏಕವಚನದಲ್ಲೇ ಮಾತನಾಡಿದ್ದರ.
ಜಮೀರ್ ಖಾನ್ ವಿರುದ್ಧ ಅವಹೇಳನಕಾರಿ ಮಾತನಾಡಿದ್ದಲ್ಲದೇ ಧರ್ಮ ಮತ್ತು ಜಾತಿ ನಿಂದನೆ ಮಾಡಿದ್ದ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಸಚಿವ ಜಮೀರ್ ಅವರ ಆಪ್ತ ಸಹಾಯಕ ಬಿ. ಎಸ್. ಅಶೋಕ್ ನೀಡಿದ ದೂರು ಆಧರಿಸಿ ಬುಧವಾರ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಇದರ ಬೆನ್ನಲ್ಲೇ ಬುಧವಾರ ರಾತ್ರೋರಾತ್ರಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.