ಗ್ಯಾರಂಟಿ ಫಲಾನುಭವಿಗಳನ್ನು ಅವಮಾನಿಸಿ, ಅಪಪ್ರಚಾರ ಮಾಡುವುದನ್ನು ಬಿಜೆಪಿ ನಿಲ್ಲಿಸದಿದ್ದರೆ ಕೋಟಿ ಕೋಟಿ ಫಲಾನುಭವಿಗಳು ನಿಮಗೆ ಪಾಠ ಕಲಿಸುತ್ತಾರೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ₹470 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು ಗ್ಯಾರಂಟಿ ವಿರೋಧಿಗಳಾದ ಬಿಜೆಪಿಯವರು ರಾಜ್ಯದಲ್ಲಿ ನಮ್ಮ ಗ್ಯಾರಂಟಿಗಳ ಫಲಾನುಭವಿಗಳಲ್ಲವೇ? ಬಿಜೆಪಿಯವರು ಉಚಿತವಾಗಿ ಬಸ್ಸಲ್ಲಿ ಓಡಾಡುತ್ತಿಲ್ಲವೇ? ಬಿಜೆಪಿಯವರು ಉಚಿತ ವಿದ್ಯುತ್ ಪಡೆಯುತ್ತಿಲ್ಲವೇ? ಬಿಜೆಪಿಯವರು ಗೃಹಲಕ್ಷ್ಮಿ ಹಣ ಪಡೆಯುತ್ತಿಲ್ಲವೇ? ಇಲ್ಲಾ, ನಾವು ತೆಗೆದುಕೊಳ್ಳುತ್ತಿಲ್ಲ ಇಲ್ಲ ಎಂದು ಎದೆ ಮುಟ್ಟಿಕೊಂಡು ಹೇಳಲಿ ನೋಡೋಣ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ರಾಜ್ಯ ಬಿಜೆಪಿಯು ರಾಜ್ಯ ಸರ್ಕಾರದ ಗ್ಯಾರಂಟಿ ಫಲಾನುಭವಿಗಳನ್ನು ಅವಮಾನಿಸಿ, ಅಪಪ್ರಚಾರ ಮಾಡುವುದನ್ನು ನಿಲ್ಲಿಸಬೇಕು, ನಿಲ್ಲಿಸದಿದ್ದರೆ ಕೋಟಿ ಕೋಟಿ ಫಲಾನುಭವಿಗಳು ನಿಮಗೆ ಸರಿಯಾದ ಪಾಠ ಕಲಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ