ಮುಸ್ಲಿಮರ ವಿರುದ್ದ ಪ್ರಚೋದನಕಾರಿ ಹೇಳಿಕೆ: ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್
ಶಿವಮೊಗ್ಗ: ಪ್ರಚೋದನಕಾರಿ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಮತ್ತೊಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದು ಅವರ ವಿರುದ್ಧ ಸುಮೋಟೋ ಕೇಸ್ ದಾಖಲಾಗಿದೆ.
ವಕ್ಪ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ದ ಮಾತನಾಡಿದ್ದ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದೆ. ನ.13 ರಂದು ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ವಕ್ಫ್ ವಿಚಾರವಾಗಿ ಮುಸ್ಲಿಮರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಟಿಗೆ ಯತ್ನಿಸಿದ್ದಾರೆ ಎಂಬ ಆರೋಪದಡಿಯಲ್ಲಿ ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ.