ಹಿರಿಯ ವಿದ್ಯಾರ್ಥಿಗಳಿಂದ ರ‍್ಯಾಗಿಂಗ್: MBBS ವಿದ್ಯಾರ್ಥಿ ಸಾವು
ಹಿರಿಯ ವಿದ್ಯಾರ್ಥಿಗಳಿಂದ ರ‍್ಯಾಗಿಂಗ್ ಗೆ ಒಳಗಾಗಿ ಎಂಬಿಬಿಎಸ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಗುಜರಾತ್ ನ ಪಟಾನ್ ಜಿಲ್ಲೆಯಲ್ಲಿ ವರದಿಯಾಗಿದೆ. ಸತತ 3 ಗಂಟೆಗಳ ಕಾಲ ನಿಲ್ಲುವಂತೆ ಹೇಳಿ ಹಿರಿಯ ವಿದ್ಯಾರ್ಥಿಗಳು ರ‍್ಯಾಗಿಂಗ್ ಮಾಡಿದ್ದರು ಎಂದು ಆರೋಪಿಸಲಾಗಿದೆ.
ದೀರ್ಘಕಾಲ ನಿಲ್ಲುವಂತೆ ಮಾಡಿದ ನಂತರ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದು, ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾವನ್ನಪ್ಪಿದ್ದ. ಘಟನೆಯ ಕುರಿತು ಕಾಲೇಜು ತನಿಖೆ ಆರಂಭಿಸಿದೆ.
ಶನಿವಾರ ರಾತ್ರಿ ಪಟಾನ್‌ನ ಧಾರ್‌ಪುರದಲ್ಲಿರುವ ಜಿಎಂಇಆರ್‌ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹಾಸ್ಟೆಲ್‌ನಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿ ಪ್ರಜ್ಞೆ ತಪ್ಪಿ ಬಿದ್ದಿದ್ದ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಆಗಲೇ ಕೊನೆಯುಸಿರೆಳೆದಿದ್ದ ಎಂದು ವರದಿಯಾಗಿದೆ. ಕಾಲೇಜಿಗೆ ಹೊಸದಾಗಿ ಪ್ರವೇಶ ಪಡೆದ 11 ಜೂನಿಯರ್ ವಿದ್ಯಾರ್ಥಿಗಳನ್ನು ಪರಿಚಯ ಮಾಡಿಕೊಳ್ಳುವ ಮುನ್ನ ಸೀನಿಯರ್ ವಿದ್ಯಾರ್ಥಿಗಳು ಎಲ್ಲಿಯೂ ಅಲುಗಾಡದಂತೆ ಬಲವಂತವಾಗಿ ಒಂದೇ ಕಡೆ ನಿಲ್ಲುವಂತೆ ಸೂಚಿಸಿದ್ದಾರೆ. ಇದರಿಂದಾಗಿ ಅನಿಲ್ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಯೋಜನವಾಗಲಿಲ್ಲ ಎನ್ನಲಾಗಿದೆ.