ಪುತ್ತೂರು: ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ, ಇಬ್ಬರ ವಿರುದ್ದ ಪ್ರಕರಣ ದಾಖಲು
ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಮಾದಕ ದ್ರವ್ಯ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ಅವರ ವಿರುದ್ದ ಪ್ರಕರಣ ದಾಖಲಿಸಿರುವ ಘಟನೆ ನ.21ರಂದು ಸಾಲ್ಮರದಲ್ಲಿ ನಡೆದಿದೆ.
ಪುತ್ತೂರು ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರು ಇಲಾಖಾ ವಾಹನದಲ್ಲಿ ಸಿಬ್ಬಂದಿಗಳ ಜೊತೆ ಕರ್ತವ್ಯದಲ್ಲಿದ್ದಾಗ, ಸಾಲ್ಮರದಲ್ಲಿ ಇಬ್ಬರು ವ್ಯಕ್ತಿಗಳು ಅನುಚಿತವಾಗಿ ವರ್ತಿಸಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿರುವ ಕುರಿತು ಬಂದ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ್ದರು.
ಅಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದರೆನ್ನಲಾದ ಮಹಮ್ಮದ್ ಇಬಾಶ್ (19.ವ) ಮತ್ತು ಅಹಮ್ಮದ್ ಇಜಾಝ್ (27.ವ)ಎಂಬವರನ್ನು ವಶಕ್ಕೆ ಪಡೆದು ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆ ಯಲ್ಲಿ ಪರೀಕ್ಷೆಗೊಳಪಡಿಸಿದಾಗ ಅವರು ಮಾದಕ ದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.