ಈಡನ್ ಗ್ಲೋಬಲ್ ಶಾಲೆಯಲ್ಲಿ ಈಡನ್ “ಸ್ಪಾರ್ಕಲ್ 2k24” ವಾರ್ಷಿಕ ಕ್ರೀಡಾಕೂಟ.
ಪುತ್ತೂರು: ಬೆಳಂದೂರಿನ “ಈಡನ್ ಗ್ಲೋಬಲ್ ಸ್ಕೂಲ್ ಇದರ ಈಡನ್ ಸ್ಪಾರ್ಕಲ್ 2k24 ವಾರ್ಷಿಕ ಕ್ರೀಡಾಕೂಟ ಬಹಳ ಅದ್ಧೂರಿಯಿಂದ ಜರುಗಿತು. ಶಾಲೆಯ ನಾಲ್ಕು ತಂಡಗಳು ವಿಶೇಷ ಪಥಸಂಚಲನದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಂಸ್ಥೆಯ ಪ್ರಾಂಶುಪಾಲರು ರಂಝೀ ಮುಹಮ್ಮದ್ ಅತಿಥಿಗಳನ್ನು ಸ್ವಾಗತಿಸಿದರು.ಸಂಸ್ಥೆಯ ಕಾರ್ಯದರ್ಶಿ ಬಶೀರ್ ಹಾಜಿ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಕ್ಕಳಿಗೆ ಪಾಠದ ಜೊತೆ ಆಟದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಪುತ್ತೂರು ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಕ್ರೀಡಾ ಮೌಲ್ಯ ಹಾಗೂ ಮಕ್ಕಳ ಶಿಕ್ಷಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ಎಂದು ತಿಳಿಸಿದರು.ಅಲ್ಲದೇ ಅವರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಈಡನ್ ಸ್ಪಾರ್ಕೆಲ್ ವಾರ್ಷಿಕ ಕ್ರೀಡಾಕೂಟದ ಲೋಗೋ ಅನಾವರಣಗೊಳಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಆಂಜನೇಯ ರೆಡ್ಡಿ ಅವರ ಸಾಧನೆಯನ್ನು ಗುರುತಿಸಿ ಸಂಸ್ಥೆಯ ವತಿಯಿಂದ ಅವರನ್ನು ಗೌರವಿಸಲಾಯಿತು. ಆಡಳಿತ ಸಮಿತಿಯ ಸದಸ್ಯರಾದ ಪುತ್ತು ಬಾವ ಹಾಜಿ ಸವಣೂರು ಮತ್ತು ಖಾದರ್ ಹಾಜಿ ಸವಣೂರು ಸ್ಪೂರ್ತಿದಾಯಕ ಮಾತುಗಳನ್ನಾಡಿ ಕ್ರೀಡಾಕೂಟಕ್ಕೆ ಶುಭಹಾರೈಸಿದರು. ಆಡಳಿತ ಸಮಿತಿಯ ಸದಸ್ಯರಾದ ಪುತ್ತುಬಾವ ಹಾಜಿ ಸವಣೂರು ಮತ್ತು ಖಾದರ್ ಹಾಜಿ ಸವಣೂರು ಸ್ಪೂರ್ತಿದಾಯಕ ಮಾತುಗಳನ್ನಾಡಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ರಝಾಕ್ ಸವಣೂರು,ಅರೇಬಿಕ್ ವಿಭಾಗದ ಮುಖ್ಯಸ್ಥರಾದ ರಶೀದ್ ಸಖಾಫಿ ಹಾಗೂ ಅಕಾಡೆಮಿಕ್ ಕೋ ಆರ್ಡಿನೇಟರ್ ಶ್ರೀಮತಿ ಅರ್ಪಿತ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಟೀಮ್ ಎಲೆಕ್ಟ್ರಮ್ ಚಾಂಪಿಯನ್ ಮತ್ತು ಟೀಮ್ ಡೈಮಂಡ್ ರನ್ನರ್ ಅಪ್ ಆಗಿ ಹೊರಹೊಮ್ಮಿತು.ಶಾಲಾ ದೈಹಿಕ ಶಿಕ್ಷಕಿ ಶ್ರೀಮತಿ ಶ್ವೇತಾ ಕುಮಾರಿ ಕ್ರೀಡಾ ಕೂಟದ ಸಂಚಾಲಕರಾಗಿ ಕಾರ್ಯನಿರ್ವಹಿಸಿದರು.
ಸಂಸ್ಥೆಯ ಶಿಕ್ಷಕಿಯರಾದ ಶ್ರೀಮತಿ ಮಮತಾ ಹಾಗೂ ಕುಮಾರಿ ಸಿನ್ವಾನ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಇಮ್ತಿಯಾಝ್ ಸಿ ಎಂ ವಂದಿಸಿದರು.