ವಿವಾದಾತ್ಮಕ ನಟ ಮನ್ಸೂರ್ ಪುತ್ರ ಡ್ರಗ್ಸ್ ಪ್ರಕರಣದಲ್ಲಿ ಅರೆಸ್ಟ್
ತಮಿಳು ನಟ ಮನ್ಸೂರ್ ಅಲಿ ಖಾನ್ ಪುತ್ರ ತುಘಲಕ್ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾನೆ. ಈ ಹಿಂದೆ ನಟಿ ತ್ರಿಷಾ ಬಗ್ಗೆ ಅವಾಚ್ಯವಾಗಿ ಮಾತನಾಡಿ ಮನ್ಸೂರ್ ಅಲಿ ಖಾನ್ ತೀವ್ರ ಟೀಕೆಗೆ ಗುರಿಯಾಗಿದ್ದ. ಹಲವು ಪ್ರಕರಣಗಳಲ್ಲಿ ಮನ್ಸೂರ್ ಅಲಿ ಖಾನ್ ಸಹ ಬಂಧನಕ್ಕೆ ಒಳಗಾಗಿದ್ದರು.
ತಮಿಳು ಸೇರಿದಂತೆ ದಕ್ಷಿಣದ ಕೆಲವು ಭಾಷೆಗಳ ಸಿನಿಮಾದಲ್ಲಿ ನಟಿಸಿರುವ ನಟ ಮನ್ಸೂರ್ ಅಲಿ ಖಾನ್ ಕಳೆದ ವರ್ಷ ತಮ್ಮ ಹೇಳಿಕೆಗಳಿಂದ ವಿವಾದಕ್ಕೆ ಗುರಿಯಾಗಿದ್ದರು. ತಮ್ಮ ವೃತ್ತಿ ಜೀವನದಲ್ಲಿ ಹಲವು ಬಾರಿ ವಿವಾದಗಳಿಗೆ ಮನ್ಸೂರ್ ಅಲಿ ಖಾನ್ ಸಿಲುಕಿದ್ದು ಜೈಲು ವಾಸವನ್ನೂ ಅನುಭವಿಸಿದ್ದಾರೆ. ಇದೀಗ ಅವರ ಪುತ್ರನೂ ತಂದೆಯ ಹಾದಿಯನ್ನೇ ಹಿಡಿದಂತಿದ್ದು, ಮನ್ಸೂಲಿ ಅಲಿ ಖಾನ್ ಪುತ್ರನ್ನು ಡ್ರಗ್ಸ್ ಪ್ರಕರಣದಲ್ಲಿ ಚೆನ್ನೈ ಪೊಲೀಸರು ಬಂಧಿಸಿದ್ದಾರೆ.