ಸವಣೂರು: ಮಾದಕ ವಸ್ತು ಸೇವಿಸಿ ಅನುಚಿತ ವರ್ತನೆ: ಮಾಂತೂರು, ಶಾಂತಿನಗರದಲ್ಲಿ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು
ಪುತ್ತೂರು: ಮಾದಕ ವಸ್ತು ಸೇವಿಸಿ ಅನುಚಿತ ವರ್ತನೆ ಮಾಡುತ್ತಿದ್ದ ಇಬ್ಬರನ್ನು ಸವಣೂರು ಸಮೀಪ ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸವಣೂರು ಸಮೀಪ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಡಬ ತಾಲೂಕು ಸವಣೂರು ಗ್ರಾಮದ ಮಾಂತೂರು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಬೆಳ್ಳಾರೆ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಈರಯ್ಯ ಡಿ ಎನ್ ಅವರು ಠಾಣಾ ಸಿಬ್ಬಂದಿಗಳ ಜೊತೆ ತೆರಳಿ ಡಿ.7ರಂದು ವಿಚಾರಣೆ ನಡೆಸಿದಾಗ ವ್ಯಕ್ತಿ ಸವಣೂರು ಗ್ರಾಮದ ಮಹಮ್ಮದ್ ಫೈಝೀನ್ (34) ಎಂಬುದಾಗಿ ತಿಳಿದು ಬಂದಿದೆ. ಈತ ಮಾದಕವಸ್ತು ಸೇವನೆ ಮಾಡಿರುವಂತೆ ಕಂಡುಬಂದ ಹಿನ್ನೆಲೆಯಲ್ಲಿ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿ ಮಾದಕವಸ್ತು ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ . 87/2024 ಕಲಂ 27(b) N.D.P.S Act ರಂತೆ ಪ್ರಕರಣ ದಾಖಲಾಗಿದೆ.
ಅದೇ ರೀತಿ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಗ್ರಾಮದ ಶಾಂತಿನಗರ ಮೆಸ್ಕಾಂ ಸಬ್ ಸ್ಟೇಷನ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಬೆಳ್ಳಾರೆ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಈರಯ್ಯ ಡಿ ಎನ್ ಈರಯ್ಯ ಡಿ ಎನ್ ಠಾಣಾ ಸಿಬ್ಬಂದಿಗಳ ಜೊತೆ ತೆರಳಿ ವಿಚಾರಣೆ ನಡೆಸಿದಾಗ ಸವಣೂರು ಗ್ರಾಮದ ಮಜೀದ್ (35) ಎಂಬುದಾಗಿ ತಿಳಿದು ಬಂದಿದೆ. ಈತ ಮಾದಕ ವಸ್ತು ಸೇವನೆ ಮಾಡಿರುವಂತೆ ಕಂಡುಬಂದ ಹಿನ್ನೆಲೆಯಲ್ಲಿ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿ ಮಾದಕವಸ್ತು ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ . 88/2024 ಕಲಂ 27(b) N.D.P.S Act ರಂತೆ ಪ್ರಕರಣ ದಾಖಲಾಗಿದೆ.