ವಿಟ್ಲ: ಜೋಕಾಲಿಯಲ್ಲಿ ಆಟ ಆಡುತ್ತಿದ್ದ ವೇಳೆ ಹಗ್ಗ ಸುತ್ತಿ ಪ್ರಾಣ ಬಿಟ್ಟ ಬಾಲಕಿ!
ವಿಟ್ಲ: ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಬಾಲಕಿಗೆ ಹಗ್ಗ ಸುತ್ತಿ ಪ್ರಾಣಕಳೆದುಕೊಂಡ ಹೃದಯವಿದ್ರಾವಕ ಘಟನೆಯ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಡಿ.8ರಂದು ನಡೆದಿದೆ.
ಮಡಲ ನಿವಾಸಿ ಕಿಶೋರ್ ಎಂಬವರ ಪುತ್ರಿ ತೀರ್ಥಶ್ರೀ ಜೋಕಾಲಿಗೆ ಸಿಲುಕಿ ಮೃತಪಟ್ಟ ಬಾಲಕಿ.
ಶೇರಾ ಶಾಲೆಯಲ್ಲಿ 3ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆಗೆ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಘಟನೆ ನಡೆದಿದೆ.
ವಿಟ್ಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೋಲೀಸರು ಭೇಟಿ ನೀಡಿದ್ದಾರೆ.