ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಇನ್ನಿಲ್ಲ
ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ.
ಎಸ್.ಎಮ್ ಕೃಷ್ಣ ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರು. ಮಂಡ್ಯ ಜಿಲ್ಲೆಯ ಸೋಮನಹಳ್ಳಿಯಲ್ಲಿ ಜನಿಸಿದ ಕೃಷ್ಣ 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಇವರು ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.