ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯರ ವಿಡಿಯೋ ಮಾಡಿ ವೈರಲ್ ಆರೋಪ; ಠಾಣೆಗೆ ದೂರು
ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯೆಯೊಬ್ಬರ ಕರ್ತವ್ಯಕ್ಕೆ ತೊಂದರೆ ನೀಡಿ ವಿಡಿಯೋ ಮಾಡಿ ವೈರಲ್ ಮಾಡಿದ ವ್ಯಕ್ತಿಗಳ ವಿರುದ್ಧ ಸರಕಾರಿ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಪುತ್ತೂರು ನಗರ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ.
ಮರಣೋತ್ತರ ಪರೀಕ್ಷೆಗೆ ಬಂದಿದ್ದ ಮೃತದೇಹವನ್ನು ವಿಳಂಭವಾಗಿ ಮರಣೋತ್ತರ ಪರೀಕ್ಷೆಗೆ ವೈದ್ಯರು ಬಂದಿದ್ದಾರೆ ಎಂದು ಆರೋಪಿಸಿ ಮೃತರ ಸಂಬಂಧಿಕರು ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯೆಯೋರ್ವರನ್ನು ತರಾಟೆಗೆ ತಗೆದು ಅದನ್ನು ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು
ಈ ಬಗ್ಗೆ ವೈದ್ಯೆ ತಾಲೂಕು ಆರೋಗ್ಯಾಧಿಕಾರಿ ದೀಪಕ್ ರೈ ಮತ್ತು ಹಿರಿಯ ವೈದ್ಯ ಆಶಾ ಪುತ್ತೂರಾಯ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ.