ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಆರೋಪಿಗಳಿಬ್ಬರ ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ
ಪುತ್ತೂರಿನ ಜನಪ್ರಿಯ ಹುಲಿವೇಷ ಕುಣಿತ ತಂಡ ‘ಟೀಮ್ ಕಲ್ಲೇಗ ಟೈಗರ‍್ಸ್’ನ ಮುಖ್ಯಸ್ಥರಾಗಿದ್ದ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳು ಜಾಮೀನಿನಲ್ಲಿ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನೂ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.
ಪ್ರಕರಣದ ಆರೋಪಿಗಳಾಗಿರುವ ಚೇತನ್ ಮತ್ತು ಮನೀಶ್ ಅವರು ಜಾಮೀನಿನ ಮೇಲೆ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಪ್ರಕರಣದ ಇನ್ನಿಬ್ಬರು ಆರೋಪಿಗಳಾಗಿರುವ ಮಂಜುನಾಥ್ ಯಾನೆ ಹರಿ ಮತ್ತು ಕೇಶವ ಪಡೀಲ್ ಅವರ ಜಾಮೀನು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ವಜಾಗೊಳಿಸಿತ್ತು. ಹೈಕೋರ್ಟ್‌ನಲ್ಲಿಯೂ ಇವರ ಜಾಮೀನು ಅರ್ಜಿ ವಜಾಗೊಂಡಿತ್ತು.