ಕಡಬ ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ: ಎಫ್ಐಆರ್ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಕೆ
ಕಡಬ ತಾಲೂಕಿನ ಮಸೀದಿಯೊಂದರ ಆವರಣಕ್ಕೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಇಬ್ಬರು ವ್ಯಕ್ತಿಗಳ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಕೆಯಾಗಿದೆ.
ಹೈಕೋರ್ಟ್ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಪ್ರಕರಣವನ್ನು ರದ್ದುಗೊಳಿಸುವ ವೇಳೆ “ಯಾರಾದರೂ ಜೈ ಶ್ರೀರಾಮ್ ಎಂದು ಕೂಗಿದರೆ ಅದು ಯಾವುದೇ ವರ್ಗದ ಧಾರ್ಮಿಕ ಭಾವನೆಯನ್ನು ಹೇಗೆ ಕೆರಳಿಸುತ್ತದೆ ಎಂಬುದು ಅರ್ಥವಾಗುತ್ತಿಲ್ಲ. ಆ ಪ್ರದೇಶದಲ್ಲಿ ಹಿಂದೂ-ಮುಸ್ಲಿಮರು ಸಾಮರಸ್ಯ ವಾಸಿಸುತ್ತಿದ್ದಾರೆ ಎಂದು ದೂರುದಾರರೇ ಹೇಳಿದ್ದಾರೆ” ಎಂದು ಹೇಳಿದ್ದರು.
2023 ರ ಸೆಪ್ಟೆಂಬರ್ 25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಗೆ ಹೈದರ್ ಅಲಿ ಸಿಎಂ ಅವರು ಸಲ್ಲಿಸಿದ ದೂರಿನ ಮೇರೆಗೆ ಕೀರ್ತನ್ ಕುಮಾರ್ ಮತ್ತು ಸಚಿನ್ ಕುಮಾರ್ ಎನ್ ಎಂ ವಿರುದ್ಧ ಎಫ್ಐಆರ್ ದಾಖಲಾಗಿತ್ತು.