ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಅಧ್ಯಕ್ಷರಾಗಿ ಕೆ.ಎಂ ಹನೀಫ್ ಮಾಡಾವು
ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷರಾಗಿ ಯುವ ನಾಯಕ, ಕೆದಂಬಾಡಿ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಕೆ.ಎಂ ಹನೀಫ್ ಮಾಡಾವು ನೇಮಕಗೊಂಡಿದ್ದಾರೆ.
ಶಾಸಕ ಅಶೋಕ್ ಕುಮಾರ್ ರೈ ಅವರ ಸೂಚನೆಯಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವರ ಶಿಫಾರಸಿನಂತೆ ಸಂಘಟನೆಯ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಈ ನೇಮಕಗೊಳಿಸಿ ಆದೇಶಿಸಿದ್ದಾರೆ.
ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ಸೇವೆ ಸಲ್ಲಿಸುತ್ತಿರುವ ಕೆ ಎಂ ಹನೀಫ್ ಮಾಡಾವು ಅವರು ಕೆಯ್ಯೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿದ್ದು ಜಿಲ್ಲಾ ವಕ್ಫ್ ಬೋರ್ಡ್ ನ ಸಲಹಾ ಸಮಿತಿಯ ಮಾಜಿ ಸದಸ್ಯರಾಗಿದ್ದಾರೆ. ಇವರು ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಕೆಯ್ಯೂರು ವಲಯ ಕಾಂಗ್ರೆಸ್ ನ ಕೋಶಾಧಿಕಾರಿಯಾಗಿ ಕೂಡ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದಾರೆ