ರಾಷ್ಟ್ರೀಯ

ಪ್ರಧಾನಿ ಮೋದಿ ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯ ಅವರ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿಯಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಒಂದು ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಆಶೀರ್ವಾದ ಪಡೆದರು. ನಾಯಕತ್ವ ಬದಲಾವಣೆ ವದಂತಿ ಬೆನ್ನಲ್ಲೇ ಈ ಭೇಟಿ ನಡೆದಿರುವುದು ಕುತೂಹಲಕ್ಕೂ ಕಾರಣವಾಗಿದೆ.

ಸಭೆ ನಂತರ ಮಾತನಾಡಿದ ವಿಜಯೇಂದ್ರ, ಪ್ರಧಾನಿಯ ಆಶೀರ್ವಾದದ ಮಾರ್ಗದರ್ಶನ ರಾಜ್ಯದಲ್ಲಿ ಪಕ್ಷ ಕಟ್ಟುವ ಕಾರ್ಯಕ್ಕೆ ಅದಮ್ಯ ಉತ್ಸಾಹ ತುಂಬಿದೆ. ಇಂದಿನ ಅವರ ಭೇಟಿಯ ಸಂದರ್ಭದ ಮಾತುಗಳು ಸಂಘಟನೆಯ ಬಲವೃದ್ಧಿಯ ಜೊತೆ ಜೊತೆಗೇ ರಾಷ್ಟ್ರ ಬಲಿಷ್ಠಗೊಳಿಸುವ ಮಹಾ ಕಾರ್ಯದಲ್ಲಿ ಯುವಜನರ ಸಹಭಾಗಿತ್ವ ನಿರೀಕ್ಷೆ ಮೀರಿ ತೊಡಗಿಸಿಕೊಳ್ಳುವಂತೆ ಕಾರ್ಯಕ್ರಮಗಳನ್ನು ರೂಪಿಸಲು ಪ್ರೇರಣೆ ನೀಡಿತು ಎಂದು ತಿಳಿಸಿದರು.

ವಿಕಸಿತ ಭಾರತ ನಿರ್ಮಾಣಕ್ಕಾಗಿ ಸಂಕಲ್ಪ ತೊಟ್ಟು ದೇಶ ಕಟ್ಟುವ ಕಾಯಕದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿರುವ ಹೆಮ್ಮೆಯ ಪ್ರಧಾನಿ ಮೋದಿಜೀಯವರ ಕಾರ್ಯ ಶೈಲಿ ನಮ್ಮಂಥ ಕಾರ್ಯಕರ್ತರಿಗೆ ನಿತ್ಯ ಚೈತನ್ಯದ ಚಿಲುಮೆಯಾಗಿದೆ ಎಂದರು.

Leave a Reply

Your email address will not be published. Required fields are marked *

error: Content is protected !!