ಕಾಲೇಜಿನಲ್ಲಿ ಕುಸಿದು ಬಿದ್ದು ಮುಬಷಿರ ಭಾನು ಮೃತ್ಯು
ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ ಡಿ.18ರಂದು ನಡೆದಿದೆ.
ಮುಬಷಿರ ಭಾನು(17ವ) ಮೃತ ವಿದ್ಯಾರ್ಥಿನಿ. ದ್ವಿತೀಯ ಪಿಯುಸಿ ಓದುತ್ತಿದ್ದಳು. ಶಿವಮೊಗ್ಗದ ನಂಜಪ್ಪ ಲೇಔಟ್ ನಲ್ಲಿರುವ ಇಂಪಿರಿಯರ್ ಕಾಲೇಜ್ ನಲ್ಲಿ ಪ್ರಜ್ಞೆ ತಪ್ಪಿ ಏಕಾಏಕಿ ಹಿಮ್ಮುಖವಾಗಿ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ಲೋ ಬಿಪಿಯಿಂದ ಮೂರ್ಛೆ ತಪ್ಪಿ ಬಿದ್ದಿದ್ದಾಳೆ. ತತ್ ಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಮಾರ್ಗ ಮಧ್ಯದಲ್ಲೇ ಪ್ರಾಣಪಕ್ಷಿ ಹಾರಿಹೋಗಿತ್ತು. ಯುವತಿ ಬಿದ್ದು ಸಾವನ್ನಪ್ಪಿದ ವಿಡಿಯೋ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ.