ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ಬಾಲಕ ಮೃತ್ಯು
ಬೆಳ್ತಂಗಡಿ: ವಿದ್ಯಾರ್ಥಿಯೊಬ್ಬ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿದ ಘಟನೆ ಪೆರೊಡಿತ್ತಾಯನ ಕಟ್ಟೆ ಬಳಿ ಇಂದು ಬೆಳಗ್ಗೆ ನಡೆದಿದೆ.
ತೆಂಕಕಾರಂದೂರು ಪೆರೋಡಿತ್ತಾಯನ ಕಟ್ಟೆ ಶಾಲಾ ಬಳಿಯ ಮನೆಯ ಬೆಳ್ತಂಗಡಿ ಸಂತ ತೆರೇಸಾ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಸ್ಟೀಪನ್ (14) ಕ್ರಿಸ್ ಮಸ್ ಪ್ರಯುಕ್ತ ಮನೆಗೆ ಆಲಂಕಾರ ಮಾಡುವ ವೇಳೆ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಬಂದರೂ ಅಷ್ಟೊತ್ತಿಗಾಗಲೇ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.