ಸಿಟಿ ರವಿ ಬಂಧನ ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ
ಬೆಂಗಳೂರು: ಸುವರ್ಣ ಸೌಧ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದದಿಂದ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರನ್ನು ಬಂಧಿಸಲಾಗಿದ್ದು ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇರೆಗೆ ಹಿರೇಬಾಗೇವಾಡಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಸಿಟಿ ರವಿ ಬಂಧನ ಖಂಡಿಸಿ ಬಿಜೆಪಿ ಹೋರಾಟ ನಡೆಸಲಿದ್ದು ಇಂದು (ಡಿ. 20) ಕರ್ನಾಟಕದಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಡೆಸುವಂತೆ ಕರೆ ಕೊಡಲಾಗಿದೆ. ಇನ್ನು ಸಿಟಿ ರವಿ ಅವರ ತವರು ಜಿಲ್ಲೆ ಚಿಕ್ಕಮಗಳೂರು ನಗರ ಬಂದ್ ಕರೆ ನೀಡಲಾಗಿದೆ ಎಂದು ವರದಿಯಾಗಿದೆ.