ಅಂಬೇಡ್ಕರ್ ಅವರ ಅವಮಾನವನ್ನು ದೇಶ ಸಹಿಸುವುದಿಲ್ಲ: ರಾಹುಲ್ ಗಾಂಧಿ
ನವದೆಹಲಿ: ಬಾಬಾಸಾಹೇಬ್ ಅಂಬೇಡ್ಕರ್ ಅವರ ಅವಮಾನವನ್ನು ದೇಶ ಸಹಿಸುವುದಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಅವರ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಬಿಜೆಪಿ ಅಂಬೇಡ್ಕರ್ ಮತ್ತು ಅವರ ಸಿದ್ಧಾಂತಕ್ಕೆ ವಿರುದ್ಧವಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು.
ಸಂಸತ್ತಿನ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, “ಅಮಿತ್ ಶಾ ಅವರು ಸಂವಿಧಾನದ ವಿರುದ್ಧ, ನಾವು ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಈ ಹಿಂದೆ ಹೇಳಿದ್ದರು, ಅವರು ಅಂಬೇಡ್ಕರ್ ಮತ್ತು ಅವರ ಸಿದ್ಧಾಂತಕ್ಕೆ ವಿರುದ್ಧವಾಗಿದ್ದಾರೆ. ಅವರ ಸಂಪೂರ್ಣ ಕೆಲಸ ಅಂಬೇಡ್ಕರ್ ಅವರ ಕೊಡುಗೆ ಮತ್ತು ಸಂವಿಧಾನವನ್ನು ಕೊನೆಗೊಳಿಸುವುದಾಗಿದೆ. ಇದು ಇಡೀ ದೇಶಕ್ಕೆ ಗೊತ್ತು ಎಂದು ಹೇಳಿದರು.