ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ತೆರಳಿದ್ದ ಯುವತಿ ಮೇಲೆ ಅತ್ಯಾಚಾರ, ಆರೋಪಿ ಅರೆಸ್ಟ್
ಬಂಟ್ವಾಳ: ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ವೀಕ್ಷಣೆಗೆ ತೆರಳಿದ್ದ ಯುವತಿಯೋರ್ವಳನ್ನು ಶಾಲಾ ಕೊಠಡಿಯಲ್ಲಿ ಕೂಡಿ ಹಾಕಿ ಯುವಕೊಬ್ಬ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿ ನಾವೂರು ನಿವಾಸಿ ಜಯಂತ ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಡಿ.14ರಂದು ನಾವೂರು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ನೋಡಲು ಮನೆಯವರ ಜೊತೆ ತೆರಳಿದ್ದ ಯುವತಿಯನ್ನು ಆರೋಪಿ ಜಯಂತ ಬಲವಂತವಾಗಿ ಶಾಲಾ ಕೊಠಡಿಯಲ್ಲಿ ಕೂಡಿ ಹಾಕಿ ಅತ್ಯಾಚಾರ ಎಸಗಿದ್ದಾಗಿ ನೊಂದ ಯುವತಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ