ರಾಷ್ಟ್ರೀಯ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ

ನವದೆಹಲಿ: ಎರಡು ಬಾರಿ ದೇಶದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದ ಮನಮೋಹನ್‌ ಸಿಂಗ್‌ ಅವರು ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

ದೇಶದ ಆರ್ಥಿಕ ಸುಧಾರಣೆಗಳ ದಿಟ್ಟ ಹೆಜ್ಜೆ ಕೈಗೊಂಡು, ಆಧುನಿಕ ಭಾರತದ ಆರ್ಥಿಕತೆಯ ರೂವಾರಿ ಎನಿಸಿದ್ದ ಸಿಂಗ್, 1991ರ ಅಕ್ಟೋಬರ್‍ನಲ್ಲಿ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಿದ್ದರು. ಅವರು 1991ರಿಂದ 1996ರವರೆಗೆ ನರಸಿಂಹ ರಾವ್ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದರು. ಬಳಿಕ 2004 ರಿಂದ 2014ರವರೆಗೆ ದೇಶದ ಪ್ರಧಾನಿಯಾಗಿದ್ದರು.

Leave a Reply

Your email address will not be published. Required fields are marked *

error: Content is protected !!