ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಒತ್ತಾಯ
ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದ್ದು ರಾಜೀನಾಮೆಗೆ ಆಗ್ರಹಿಸಿದೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಅಂಬೇಡ್ಕರ್ ಸಂವಿಧಾನವು ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ, ಬೇರೆಯವರಿಗೆ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಿ ನೈತಿಕತೆ ತೋರಬೇಕು. ಗುತ್ತಿಗೆದಾರ ಸಚಿನ್ ಸಾವಿನಲ್ಲಿ ಪ್ರಿಯಾಂಕ್ ಖರ್ಗೆ ಅವರ ನಿಕಟವರ್ತಿಗಳ ಪಾತ್ರವಿದೆ ಎಂಬುದು ಸ್ಪಷ್ಟವಾಗಿದೆ. ಹೀಗಾಗಿ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಛಲವಾದಿ ನಾರಾಯಣಸ್ವಾಮಿ ವಿಧಾನ ಪರಿಷತ್ತಿನಲ್ಲಿ ಪ್ರಿಯಾಂಕ್ ಖರ್ಗೆ ಬಂಧನಕ್ಕೆ ಒತ್ತಾಯಿಸಿದರು. ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸಂತ್ರಸ್ತ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ್ದಾರೆ.