ವಿಟ್ಲ: ಉದ್ಯಮಿ ಮನೆಗೆ ನಕಲಿ ED ಅಧಿಕಾರಿಗಳ ದಾಳಿ: 30 ಲಕ್ಷ ರೂ ದೋಚಿ ಪರಾರಿ
ವಿಟ್ಲ: ಈಡಿ ಅಧಿಕಾರಿಗಳು ಎಂದು ನಂಬಿಸಿ ನಕಲಿ ಅಧಿಕಾರಿಗಳು ದಾಳಿ ನಡೆಸಿ ಬರೋಬ್ಬರಿ 30 ಲಕ್ಷ ಲೂಟಿ ಮಾಡಿದ ಘಟನೆ ವಿಟ್ಲದ ಬೋಳಂತೂರು ಎಂಬಲ್ಲಿ ನಡೆದಿದೆ.

ಬಂಟ್ವಾಳ ತಾಲ್ಲೂಕಿನ ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಬೋಳಂತರು ನಾರ್ಶ ಎಂಬಲ್ಲಿ ಸಿಂಗಾರಿ ಬೀಡಿ ಮಾಲಕರ ಮನೆಗೆ ತಮಿಳುನಾಡು ಮೂಲದ ಕಾರ್ ನಲ್ಲಿ ಆಗಮಿಸಿದ ತಂಡ ಬಂದು ದಿಡೀರ್ ದಾಳಿ ನಡೆಸಿ ಈಡಿ ಅಧಿಕಾರಿಗಳು ಎಂದು ನಂಬಿಸಿ ಮನೆಯಲ್ಲಿದ್ದ ಸುಮಾರು 30 ಲಕ್ಷ ರೂಪಾಯಿಗಳನ್ನು ದೋಚಿ ಪರಾರಿಯಾಗಿದ್ದಾರೆ.





