ಬಾಂಗ್ಲಾ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಎರಡನೇ ಬಂಧನ ವಾರಂಟ್
ಬಾಂಗ್ಲಾದೇಶದ ಅಂತರಾಷ್ಟ್ರೀಯ ಕ್ರಿಮಿನಲ್ ಟ್ರಿಬ್ಯೂನಲ್, ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಮತ್ತು ಮಾಜಿ ಮಿಲಿಟರಿ ಜನರಲ್‌ಗಳು ಮತ್ತು ಮಾಜಿ ಪೊಲೀಸ್ ಮುಖ್ಯಸ್ಥರು ಸೇರಿದಂತೆ 11 ಇತರರ ವಿರುದ್ಧ ಎರಡನೇ ಬಂಧನ ವಾರಂಟ್ ಹೊರಡಿಸಿದೆ.
![](https://newsbites.in/wp-content/uploads/2025/01/img_20250107_1451341153762716391695668.jpg)
ಈ ಹೊಸ ಬಂಧನ ವಾರಂಟ್ ನ್ನು ಜನವರಿ 6 ರಂದು ಹೊರಡಿಸಲಾಗಿದೆ. ಶೇಖ್ ಹಸೀನಾ ಪದಚ್ಯುತಿಯ ಬಳಿಕ ಭಾರತದಲ್ಲಿ ಆಶ್ರಯ ಪಡೆದಿದ್ದು, ಅವರ ವಿರುದ್ಧ ಹೊರಡಿಸಲಾದ ಎರಡನೇ ಬಂಧನ ವಾರಂಟ್ ಇದಾಗಿದೆ. ಬಾಂಗ್ಲಾ ನ್ಯಾಯಮಂಡಳಿಯು ಹಸೀನಾ ವಿರುದ್ಧ ಇದುವರೆಗೆ ಮೂರು ಪ್ರಕರಣಗಳನ್ನು ದಾಖಲಿಸಿದೆ