ಕರಾವಳಿರಾಜ್ಯ

ಮಂಗಳೂರು: ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ:  ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ

ಉಲ್ಲಾಳದ ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿ ಶೀಘ್ರ ಆರೋಪಿಗಳ ಪತ್ತೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ದರೋಡೆ ಮಾಡಿ ಆರೋಪಿಗಳು ಇಷ್ಟು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ? ಎಷ್ಟೆಲ್ಲಾ ಟೋಲ್ ಗಳನ್ನು ದಾಟಿ ಹೋಗಿದ್ದಾರೆ, ತಕ್ಷಣ ಟೋಲ್ ಗಳನ್ನು‌ ಏಕೆ ಬಿಗಿ ಮಾಡಲಿಲ್ಲ?
ಎಲ್ಲಾ ಟೋಲ್ ಗಳಲ್ಲೂ ಬಿಗಿ ತಪಾಸಣೆ ನಡೆಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂಧಿ ಹಾಕಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಪ್ಪಿಸಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!