ಬಿಜೆಪಿ, ಆರೆಸ್ಸೆಸ್ ವಿರುದ್ದ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ FIR
ಬಿಜೆಪಿ ಹಾಗೂ ಆರೆಸ್ಸೆಸ್ ದೇಶದ ಪ್ರತಿಯೊಂದು ಸಂಘ ಸಂಸ್ಥೆಗಳನ್ನು ವಶಪಡಿಸಿಕೊಳ್ಳುತ್ತಿದೆ ಎಂಬ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಅಸ್ಸಾಂ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಗುವಾಹತಿಯ ಪಾನ್ ಬಜಾರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ರಾಹುಲ್ ಅವರ ಹೇಳಿಕೆ ದೇಶದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯ ತರವಂಥದ್ದು ಎಂದು ಆಪಾದಿಸಲಾಗಿದೆ. ಭಾರತೀಯ ನ್ಯಾಯಸಂಹಿತೆಯ ಸೆಕ್ಷನ್ 152 ಮತ್ತು 197(1)ಡಿ ಅನ್ವಯ ಇದು ಜಾಮೀನು ರಹಿತ ಅಪರಾಧವಾಗಿದೆ ಎನ್ನಲಾಗಿದೆ.