ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ
ಕೋಲ್ಕತ್ತಾದ ಆರ್ ಜಿ ಕರ್ ಆಸ್ಪತ್ರೆಯ ಕಿರಿಯ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಕೋಲ್ಕತ್ತಾದ ನ್ಯಾಯಾಲಯ ಆದೇಶ ನೀಡಿದೆ.
ಪಶ್ಚಿಮ ಬಂಗಾಳ ಸರ್ಕಾರದ ಅಧೀನದ ಕೋಲ್ಕತ್ತಾದ ಆರ್.ಜಿ.ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ವಿದ್ಯಾರ್ಥಿನಿಯ ಮೃತದೇಹ ಆಸ್ಪತ್ರೆಯ ಸೆಮಿನಾರ್ ರೂಂನಲ್ಲಿ ಪತ್ತೆಯಾಗಿತ್ತು. ಪ್ರಕರಣ ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಆರೋಪಿ ಸಂಜಯ್ ರಾಯ್ ಗೆ ಬಂಧಿಸಲಾಗಿತ್ತು. ಆರ್ ಜಿ ಕರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಕಿರಿಯ ವೈದ್ಯೆಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈ ಮೊದಲು ಸಿಬಿಐ ಆರೋಪ ಪಟ್ಟಿ ಸಲ್ಲಿಸಿತ್ತು. ಪಶ್ಚಿಮ ಬಂಗಾಳದ ಸೀಲ್ಡಾ ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಸಿಬಿಐ ಸಂಜಯ್ ರಾಯ್ ಏಕೈಕ ಆರೋಪಿ ಎಂದು ಉಲ್ಲೇಖಿಸಿತ್ತು.