ರಾಜ್ಯ

ಮೈಕ್ರೋ ಫೈನಾನ್ಸ್‌ ಹಾವಳಿ: ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜ.25ರಂದು ಮಹತ್ವದ ಸಭೆ ನಡೆಯಲಿದ್ದು ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಹಾವಳಿಗೆ ಕಡಿವಾಣ ಹಾಕಲು ಉದ್ದೇಶಿಸಿದ್ದು ಸರಕಾರ ಈ ನಿಟ್ಟಿನಲ್ಲಿ ಕಾಯ್ದೆಗೆ ತಿದ್ದುಪಡಿ ತರಲು ಚಿಂತನೆ ನಡೆಸಿದೆ.

Oplus_131072

ಮೈಕ್ರೋಫೈನಾನ್ಸ್‌ಗಳ ಧೋರಣೆಯಿಂದ ಜನರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಕೆಲವರು ಗ್ರಾಮಗಳನ್ನೇ ತೊರೆದು ಹೋಗಿದ್ದಾರೆ. ಇನ್ನು ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಠಿನ ಕಾಯ್ದೆ ಜಾರಿಗೊಳಿಸಲು ಸರಕಾರ ಮುಂದಾಗಿದೆ.

ಮೈಕ್ರೋಫೈನಾನ್ಸ್‌ಗಳ ಹಾವಳಿಗೆ ಕಡಿವಾಣ ಹಾಕಲು ಕಾನೂನುಗಳನ್ನು ಮತ್ತಷ್ಟು ಬಲಗೊಳಿಸುವ ಆವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಗಮನಹರಿಸಿದ್ದಾರೆ. ಮುಖ್ಯಮಂತ್ರಿ ಕೂಡ ಕಾನೂನು ತರುವ ಬಗ್ಗೆ ಚಿಂತನೆ ನಡೆಸಿದ್ದಾರೆ. ಶನಿವಾರ ನಡೆಯಲಿರುವ ಸಭೆಯಲ್ಲಿ ಇದು ಚರ್ಚೆಗೆ ಬರಲಿದೆ ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!