ರಾಷ್ಟ್ರೀಯ

ಕುಂಭ ಮೇಳದಲ್ಲಿ ಕಾಲ್ತುಳಿತ: ಮೃತರ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಯೋಗಿ

ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ದುರಂತ ಪ್ರಕರಣದಲ್ಲಿ 30 ಭಕ್ತರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರ ಪ್ರಕಟಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಿಎಂ ಯೋಗಿ ಆದಿತ್ಯನಾಥ್ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ಈ ದುರಂತದಲ್ಲಿ 90ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದು, 36 ಜನರು ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಯಾಗರಾಜ್‌ನ ಮಹಾಕುಂಭ ಮೇಳದಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟವರ ಪೈಕಿ ಕರ್ನಾಟಕದ ನಾಲ್ವರು ಕೂಡಾ ಸೇರಿದ್ದಾರೆ.

Leave a Reply

Your email address will not be published. Required fields are marked *

error: Content is protected !!