ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್
ಬೆಂಗಳೂರು: ಪತ್ನಿ ಪಾರ್ವತಿಗೆ ಸೈಟ್ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮುಡಾ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ.

ಲೋಕಾಯುಕ್ತ ತನಿಖೆಯಲ್ಲಿ ಯಾವುದೇ ಲೋಪದೋಷಗಳು ಕಂಡು ಬಂದಿಲ್ಲವೆಂದು ಅಭಿಪ್ರಾಯ ವ್ಯಕ್ತಪಡಿಸಿ ಸಿಬಿಐಗೆ ತನಿಖೆ ಕೋರಿ ದೂರುದಾರ ಸ್ನೇಹ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ. ಆ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.