ಸರಪಳಿಯಲ್ಲಿ ಬಂಧಿಸಿ ಭಾರತೀಯರ ಗಡಿಪಾರು: ಅಮೇರಿಕದ ನಡೆಗೆ ಡಿ.ಕೆ.ಶಿವಕುಮಾರ್ ಆಕ್ರೋಶ
ಬೆಂಗಳೂರು: ವಲಸಿಗರು ಮನುಷ್ಯರೇ. ಪ್ರಾಣಿಗಳಲ್ಲ. ಅವರನ್ನು ಅಪರಾಧಿಗಳಂತೆ ಕೈ-ಕಾಲಿಗೆ ಕೋಳ ಹಾಕಿ ಕರೆತಂದಿದ್ದು ತಪ್ಪು. ಅಮೆರಿಕದಂತಹ ಮುಂದುವರೆದ ದೇಶದಿಂದ ಇಂತಹ ನಡೆ ಖಂಡನೀಯ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತದ ಅಕ್ರಮ ವಲಸಿಗರನ್ನು ಅಮೆರಿಕಾ ಕೈದಿಗಳಂತೆ ನಡೆಸಿಕೊಂಡಿರುವುದನ್ನು ಅವರು ತೀವ್ರವಾಗಿ ಟೀಕಿಸಿದ ಅವರು ಅಕ್ರಮವಾಗಿ ಅವರ ದೇಶದಲ್ಲಿ ನೆಲೆಸಿದ್ದರೆ, ಅದಕ್ಕೆ ಯಾವ ಶಿಕ್ಷೆ ನೀಡಬೇಕೋ ನೀಡಲಿ. ಅದನ್ನು ಬಿಟ್ಟು, ಈ ರೀತಿ ಖೈದಿಗಳಿಗೆ ಹಾಕಿದಂತೆ ಸರಪಳಿ ಹಾಕಿರುವುದು ಖಂಡನೀಯ, ಒಪ್ಪಲು ಸಾಧ್ಯವಿಲ್ಲ. ಇದು ಮಾನವ ಕುಲಕ್ಕೆ ಅಗೌರವ ಎಂದು ಕಿಡಿಕಾರಿದ್ದಾರೆ.