ಇಂಗ್ಲೆಂಡ್ ವಿರುದ್ಧ 3-0 ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಮ್ ಇಂಡಿಯಾ
ಅಹಮದಾಬಾದ್: ಇಂಗ್ಲೆಂಡ್ ವಿರುದ್ಧದ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ 142 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ತವರಿನಲ್ಲೇ 3-0ನಲ್ಲಿ ಸರಣಿ ಕ್ಲೀನ್ ಸ್ವೀಪ್ ಮಾಡಿದೆ.

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 356 ರನ್ ಪೇರಿಸಿತ್ತು. 357 ರನ್‌ಗಳ ಬೃಹತ್ ಮೊತ್ತದ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಟೀಂ ಇಂಡಿಯಾ ಬೌಲರ್‌ಗಳ ಆರ್ಭಟಕ್ಕೆ ನಲುಗಿತು. 34.2 ಓವರ್‌ಗಳಲ್ಲೇ 214 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು ಸೋಲೊಪ್ಪಿಕೊಂಡಿತು.