ಐಪಿಎಲ್-2025 RCB ತಂಡಕ್ಕೆ ಹೊಸ ನಾಯಕ
ಐಪಿಎಲ್-2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಜತ್ ಪಾಟಿದಾರ್ ನಾಯಕತ್ವದಲ್ಲಿ ಕಣಕ್ಕಿಳಿಯಲಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ರಜತ್ ಪಾಟಿದಾರ್ ಮುನ್ನಡೆಸಲಿದ್ದಾರೆ. ಇದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಫಾಫ್ ಡುಪ್ಲೆಸಿಸ್ ಮುನ್ನಡೆಸಿದ್ದರು.ಈ ಬಾರಿ ಆರ್ಸಿಬಿ ತಂಡದ ನಾಯಕರಾಗಿ ವಿರಾಟ್ ಕೊಹ್ಲಿ ನೇಮಕವಾಗಲಿದ್ದಾರೆ ಎನ್ನಲಾಗಿತ್ತು. ಆದರೀಗ ತಂಡದ ಸಾರಥ್ಯವನ್ನು ಪಾಟಿದಾರ್ಗೆ ವಹಿಸಲಾಗಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ರಜತ್ ಪಾಟಿದಾರ್ ಮುನ್ನಡೆಸಲಿದ್ದಾರೆ. ಈ ಹಿಂದೆ ಆರ್ಸಿಬಿ ತಂಡದ ನಾಯಕರಾಗಿ ವಿರಾಟ್ ಕೊಹ್ಲಿ ನೇಮಕವಾಗಲಿದ್ದಾರೆ ಎನ್ನಲಾಗಿತ್ತು. ಆದರೀಗ ತಂಡದ ಸಾರಥ್ಯವನ್ನು ಪಾಟಿದಾರ್ಗೆ ವಹಿಸಲಾಗಿದೆ.

2021 ರಿಂದ ಆರ್ಸಿಬಿ ತಂಡದ ಖಾಯಂ ಸದಸ್ಯರಾಗಿ ಕಾಣಿಸಿಕೊಳ್ಳುತ್ತಿರುವ 31 ವರ್ಷದ ಪಾಟಿದಾರ್ಗೆ ಮಹತ್ವದ ಕ್ಯಾಪ್ಟನ್ ಪಟ್ಟ ನೀಡಲಾಗಿದ್ದು ಈ ಬಾರಿಯದರೂ ಆರ್ ಸಿ ಬಿ ಕಪ್ ಗೆಲ್ಲುತ್ತಾ ಕಾದು ನೋಡಬೇಕಿದೆ.