ಕರಾವಳಿ

ಪುತ್ತೂರಿನ ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ಬೃಹತ್ ಪಿಡಬ್ಲ್ಯುಡಿ ಕಾಂಪ್ಲೆಕ್ಸ್: ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸಚಿವ ಜಾರಕಿಹೊಳಿ


ಪುತ್ತೂರು: ಪುತ್ತೂರು ಕ್ಷೇತ್ರದ ಅಭಿವೃದ್ದಿಗೆ ಕಾಳಜಿ ವಹಿಸುತ್ತಿರುವ ಶಾಸಕ ಅಶೋಕ್ ರೈ ಅವರ ಅಭಿವೃದ್ದಿ ಕಾರ್ಯಕ್ಕೆ ಮತ್ತೊಂದು ಕೊಡುಗೆ ಸೇರಿಕೊಂಡಿದೆ. ಪುತ್ತೂರಿನ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಬೃಹತ್ ಕಮರ್ಷಿಯಲ್ ಕಾಂಪ್ಲೆಕ್ಸ್ ತಲೆ ಎತ್ತಲಿದೆ, ಶಾಸಕರ ಕನಸಿನ ಯೋಜನೆಗೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರು ಗ್ರೀನ್ ಸಿಗ್ನಲ್ ನೀಡಿದ್ದಾರೆ.


ಮಂಗಳೂರಿನ‌ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನಡೆದ ಲೋಕೋಪಯೋಗಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡಿದ ಶಾಸಕ ಅಶೋಕ್ ರೈ ಅವರು‌ ಪುತ್ತೂರು ಬಸ್ ನಿಲ್ದಾಣದ ಬಳಿ ಲೋಕೋಪಯೋಗಿ ಇಲಾಖೆಗೆ ಸೇರಿದ ಜಾಗವಿದ್ದು ಅದು ಬಹಳ ವರ್ಷದಿಂದ ಹಾಗೇ ಉಳಿದುಕೊಂಡಿದೆ. ಇದರಲ್ಲಿ ಕಮರ್ಷಿಯಲ್ ಕಾಂಪ್ಲೆಕ್ಸ್ ನಿರ್ಮಾಣವಾದಲ್ಲಿ ಇಲಾಖೆಗೂ  ಹಣಕಾಸಿನ ನೆರವು ಆಗಲಿದ್ದು, ಸರಕಾರಕ್ಕೂ ಪ್ರಯೋಜನವಿದೆ.‌ ಬಸ್ ನಿಲ್ದಾಣಕ್ಕೆ ತಾಗಿಕೊಂಡೇ ಇರುವ ಕಾರಣ ಇದು ನಿರ್ಮಾಣವಾದಲ್ಲಿ ಬಹಳ ಉಪಯುಕ್ತವಾಗಲಿದೆ ಎಂದು ಸಚಿವರ ಗಮನಕ್ಕೆ ತಂದರು. ಈ ಬಗ್ಗೆ ಕೂಡಲೇ ಕ್ರಮಕೈಗೊಳ್ಳುವಂತೆ ಇಲಾಖೆ ಇಂಜಿನಿಯರ್ ಗೆ ಸಚಿವರು ಸೂಚನೆ ನೀಡಿದರು.

Leave a Reply

Your email address will not be published. Required fields are marked *

error: Content is protected !!