ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಅಧಿಕಾರ ಸ್ವೀಕಾರ
ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದ ಜ್ಞಾನೇಶ್ ಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ.

ಸಿಇಸಿಯಾಗಿ ಅಧಿಕಾರ ವಹಿಸಿಕೊಂಡ ನಂತರ ದೇಶದ ಮತದಾರರಿಗೆ ಸಂದೇಶವನ್ನು ರವಾನಿಸಿದ ಜ್ಞಾನೇಶ್ ಕುಮಾರ್ ಅವರು ರಾಷ್ಟ್ರ ನಿರ್ಮಾಣದ ಮೊದಲ ಹೆಜ್ಜೆ ಮತದಾನವಾಗಿದ್ದು, 18 ವರ್ಷ ತುಂಬಿದ ಪ್ರತಿಯೊಬ್ಬ ಭಾರತದ ನಾಗರಿಕನೂ ಮತದಾನ ಮಾಡಬೇಕು. ಭಾರತದ ಸಂವಿಧಾನ, ಚುನಾವಣಾ ಕಾನೂನುಗಳು, ನಿಯಮಗಳು ಮತ್ತು ಸೂಚನೆಗಳ ಪ್ರಕಾರ, ಚುನಾವಣಾ ಆಯೋಗವು ಮತದಾರರೊಂದಿಗೆ ಇತ್ತು, ಇದೆ ಮತ್ತು ಯಾವಾಗಲೂ ಇರುತ್ತದೆ ಎಂದು ತಿಳಿಸಿದ್ದಾರೆ.