ದೆಹಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಆಯ್ಕೆ: ಬಿಜೆಪಿ ಘೋಷಣೆ
ದೆಹಲಿ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಬಿಜೆಪಿ ತೆರೆ ಎಳೆದಿದೆ. ರೇಖಾ ಗುಪ್ತಾ ಅವರನ್ನು ದೆಹಲಿ ಮುಖ್ಯಮಂತ್ರಿಯಾಗಿ ಬಿಜೆಪಿ ಆಯ್ಕೆ ಮಾಡಿದೆ. ಪರ್ವೇಶ್ ವರ್ಮ ಅವರನ್ನು ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.

4ನೇ ಮಹಿಳಾ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಆಯ್ಕೆಯಾಗಿದ್ದಾರೆ. ರೇಖಾ ಗುಪ್ತಾ (ಶಾಲಿಮಾರ್ ಬಾಗ್ ಶಾಸಕಿ) ಬಿಜೆಪಿಯ ಮಹಿಳಾ ವಿಭಾಗದ ರಾಷ್ಟ್ರೀಯ ಉಪಾಧ್ಯಕ್ಷೆಯೂ ಆಗಿದ್ದಾರೆ.
ಬಿಜೆಪಿ ಶಾಸಕರ ಸಭೆಯಲ್ಲಿ ಸಿಎಂ ಹೆಸರನ್ನು ಅಂತಿಮಗೊಳಿಸಲಾಗಿದೆ. ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಫೆಬ್ರವರಿ 20ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಗುರುವಾರ ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಗಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹಲವಾರು ಹಿರಿಯ ನಾಯಕರು ಭಾಗವಹಿಸಲಿದ್ದಾರೆ.