ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿಯ ‘ಬಿ’ ಟೀಮ್ ಆಗಿತ್ತು: ಮಾಯಾವತಿ
ಇತ್ತೀಚಿಗೆ ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿಯ ‘ಬಿ’ ಟೀಮ್ ಆಗಿ ಸ್ಪರ್ಧಿಸಿತ್ತು ಎಂದು ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಪಕ್ಷದ ಪ್ರಸ್ತುತ ರಾಜಕೀಯ ವಿಧಾನವನ್ನು ಪ್ರಶ್ನಿಸಿದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರಿಗೆ ಈ ಹೇಳಿಕೆ ಮೂಲಕ ಮಾಯಾವತಿ ತಿರುಗೇಟು ನೀಡಿದ್ದಾರೆ.

ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ(ಬಿಎಸ್ಪಿ) ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಸೇರದಿರುವುದರಿಂದ ನಿರಾಶೆಗೊಂಡಿದೆ ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಿನ್ನೆ ಹೇಳಿದ್ದರು.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಮಾಯಾವತಿ, “ಈ ಬಾರಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಯ ಬಿ ಟೀಮ್ ಆಗಿ ಹೋರಾಡಿತು, ಇದರಿಂದಾಗಿ ಬಿಜೆಪಿ ಅಲ್ಲಿ ಅಧಿಕಾರಕ್ಕೆ ಬಂದಿತು ಎಂಬುದು ಸಾಮಾನ್ಯ ಚರ್ಚೆಯಾಗಿದೆ” ಎಂದು ಟೀಕಿಸಿದ್ದಾರೆ.