ಮಂಗಳೂರು: ವಕ್ಫ್ ತಿದ್ದುಪಡಿ ಮಸೂದೆ ಹಿಂಪಡೆಯಲು ಖಾಝಿ, ಉಲಮಾಗಳ ಆಗ್ರಹ
ಮಂಗಳೂರು: ಮುಸ್ಲಿಮರ ಧಾರ್ಮಿಕ ಸ್ವಾತಂತ್ರ್ಯದ ಮೇಲಿನ ದಾಳಿಯ ಭಾಗವಾಗಿ 2024ರ ಆಗಸ್ಟ್ ತಿಂಗಳಲ್ಲಿ ಸಂಸತ್ತಿನಲ್ಲಿ ಮಂಡಿಸಿದ ವಕ್ಫ್ ತಿದ್ದುಪಡಿ ಮಸೂದೆಯನ್ನು ಹಿಂಪಡೆಯಬೇಕು ಎಂದು ಖಾಝಿಗಳಾದ ತ್ವಾಖಾ ಅಹ್ಮದ್ ಮುಸ್ಲಿಯಾರ್ ಮತ್ತು ಝೈನುಲ್ ಉಲಮಾ ಮಾಣಿ ಉಸ್ತಾದ್ ಸಹಿತ ಪ್ರಮುಖ ಉಲಮಾಗಳು ಆಗ್ರಹಿಸಿದ್ದಾರೆ.

ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ವತಿಯಿಂದ ಮಾ.1ರಂದು ನಗರದ ಹೊಟೇಲ್ ಸಭಾಂಗಣವೊಂದರಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಬಿ.ಎ.ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಮಾತನಾಡಿ ದೇಶದ ಅತಿದೊಡ್ಡ ಅಲ್ಪಸಂಖ್ಯಾತ ಸಮುದಾಯವಾದ ಮುಸ್ಲಿಮರಲ್ಲಿ ಅಸುರಕ್ಷತೆಯನ್ನು ಮೂಡಿಸುವ ಮತ್ತು ಅವರಿಗೆ ಧಾರ್ಮಿಕ ಸ್ವಾತಂತ್ರ್ಯವನ್ನು ಒದಗಿಸಿರುವ ಸಂವಿಧಾನದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದ ಈ ವಕ್ಫ್ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರಕಾರವು ಹಿಂಪಡಯಬೇಕು ಎಂದು ಒತ್ತಾಯಿಸಿದರು.