ಕ್ರೈಂರಾಷ್ಟ್ರೀಯ

ಮೀನು ಗಂಟಲೊಳಗೆ ಸಿಲುಕಿ ಯುವಕ ಮೃತ್ಯು

ಕೇರಳ: ಭತ್ತದ ಗದ್ದೆಯಲ್ಲಿ ಮೀನು ಹಿಡಿಯುತ್ತಿದ್ದಾಗ ಮೀನೊಂದು ಗಂಟಲೊಳಗೆ ಹೋಗಿ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಆಲಪ್ಪುಳ ಸಮೀಪದ ಕಾಯಂಕುಲಂನಲ್ಲಿ ಭಾನುವಾರ ನಡೆದಿದೆ.




ಮೃತ ಯುವಕನನ್ನು ಆದರ್ಶ್ ಅಲಿಯಾಸ್ ಉನ್ನಿ (25ವ ) ಎಂದು ಗುರುತಿಸಲಾಗಿದೆ.

ಸಂಜೆ 4.30ರ ಸುಮಾರಿಗೆ ತನ್ನ ಸ್ನೇಹಿತರೊಂದಿಗೆ ಗದ್ದೆಗೆ ನೀರು ಹಾಯಿಸಿ ಮೀನು ಹಿಡಿಯುತ್ತಿದ್ದಾಗ ಈ ಘಟನೆ ನಡೆದಿದೆ. ಇನ್ನೊಂದು ಮೀನನ್ನು ಹಿಡಿಯಲು ಯತ್ನಿಸುತ್ತಿದ್ದಾಗ ಮೀನೊಂದು ಆತನ ಬಾಯಿ ಕಚ್ಚಿಕೊಂಡು ಗಂಟಲೊಳಗೆ ಹೋಗಿ ಸಿಲುಕಿಕೊಂಡಿದೆ. ಕೂಡಲೇ ಯುವಕನನ್ನು ಓಚಿರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೂ ಆತನ ಪ್ರಾಣ ಉಳಿಸಲಾಗಲಿಲ್ಲ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!